ನವದೆಹಲಿ: ಆಧಾರ್ ಸಂಖ್ಯೆಯನ್ನು ವೋಟರ್ ಐಡಿಗೆ ಲಿಂಕ್ ಮಾಡುವ ಯೋಚನೆಗೆ ಹಲವಾರು ನಾಗರಿಕರು ಬೆಂಬಲ ಸೂಚಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ನಡೆಯುವ ಅಕ್ರಮಗಳಿಗೆ ತಡೆ ಬೀಳಲಿದೆ ಎಂಬುದು ಅವರ ಅನಿಸಿಕೆಯಾಗಿದೆ.
ಲೋಕಲ್ ಸರ್ಕಲ್ಸ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಬಹುತೇಕರು ಆಧಾರ್-ವೋಟರ್ ಐಡಿ ಜೋಡಿಣೆಯಾಗಲಿ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
2015ರಲ್ಲಿ ಲಿಂಕ್ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತಾದರೂ ಸುಪ್ರೀಂಕೋರ್ಟ್ ತಡೆವೊಡ್ಡಿತ್ತು. ಇದೀಗ ಸಮೀಕ್ಷೆಗೊಳಪಟ್ಟ ಪ್ರತಿ ಸಾವಿರ ಮಂದಿಯಲ್ಲಿ 9,160 ಮಂದಿ ಈ ಕ್ರಮದ ಪರವಾಗಿ ಇದ್ದಾರೆ ಎಂಬುದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.