ನವದೆಹಲಿ: ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ತಂದಿರುವ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಕೆಲ ದುಷ್ಕರ್ಮಿಗಳು ಇದೀಗ ಹಣ ಮಾಡುವ ದಂಧೆಗೆ ಇಳಿದಿದ್ದಾರೆ.
ಈ ಯೋಜನೆಯ ಅರ್ಜಿ ನಮೂನೆಗಳನ್ನು ನಕಲಿ ಮಾಡಿ ಅದನ್ನು ಹೆಣ್ಣು ಮಕ್ಕಳ ಕುಟುಂಬಿಕರಿಗೆ ಹಂಚಿ ಅವರಿಂದ ಹಣ ಕೀಳುತ್ತಿದ್ದಾರೆ. ಈ ವರ್ಷ ಸರ್ಕಾರಕ್ಕೆ ಬಂದಿರುವ ಬಹುತೇಕ ಅರ್ಜಿಗಳು ನಕಲಿಯಾಗಿದೆ.
ಈ ಬಗ್ಗೆ ಎಚ್ಚರಿಕೆ ರವಾನಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಲ್ಲಿ ನೇರ ಹಣ ವರ್ಗಾವಣೆ ಇಲ್ಲ, ವೈಯಕ್ತಿಕವಾಗಿ ಹಣ ನೀಡುವ ಯೋಜನೆಯೂ ಇದಲ್ಲ, ಜನರು ಮೋಸ ಹೋಗಬಾರದು ಎಂದಿದೆ.
ಇದು ಜಿಲ್ಲಾಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಕಛೇರಿಗಳಿಂದ ಅನುಷ್ಠಾನಗೊಳ್ಳುವ ಯೋಜನೆಯಾಗಿದೆ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಯೋಜನೆ ಇದಾಗಿದೆ ಎಂದು ಸ್ಪಷ್ಟಪಡಿಸಿದೆ.
ಯುಪಿ, ಹರಿಯಾಣ, ಪಂಜಾಬ್, ಉತ್ತರಾಖಂಡ, ದೆಹಲಿಗಳಲ್ಲಿ ಈ ಯೋಜನೆ ಹೆಸರಲ್ಲಿ ಮೋಸಗಳು ನಡೆಯುತ್ತಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.