ಮಂಗಳೂರು : ವಿಜಯಪುರ ನಗರದಲ್ಲಿ ದಿನಾಂಕ 19-12-2017 ರಂದು ಮಧ್ಯಾಹ್ನ ಬಾಲಕಿ ದಾನೇಶ್ವರಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆಯನ್ನು ಆಗ್ರಹಿಸಿ ರಾಜ್ಯಾದ್ಯಂತ ಎಬಿವಿಪಿದ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದವು.
ಘಟನೆಯ ಕುರಿತು ಪೋಲಿಸರಿಗೆ ದೂರು ನೀಡಲು ತೆರಳಿದಾಗ ಅಲ್ಲಿರುವ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಮೃತ ಬಾಲಕಿಯ ಶವವನ್ನು ಇಟ್ಟುಕೊಂಡು ಅಹೋ ರಾತ್ರಿಯವರಗೂ ಸ್ಥಳದಲ್ಲಿಯೇ ಧರಣಿಯನ್ನು ಸಹ ನಡೆಸಿದರು ಯಾವೊಬ್ಬ ಅಧಿಕಾರಿಯು ಪೋಷಕರ ದೂರನ್ನು ದಾಖಲಿಸಿಕೊಂಡಿಲ್ಲ. ರಾಜ್ಯದ ಮುಖ್ಯಮಂತ್ರಿಗಳ ಪ್ರವಾಸದ ನೆಪವನ್ನು ಒಡ್ಡಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ವಿಜಯಪುರ ಎಸ್ಪಿ ಅವರು ಪ್ರಯತ್ನವನ್ನು ನಡೆಸುತ್ತಿದ್ದಾರೆ. ಆದ್ದರಿಂದ ಈ ಪ್ರಕರಣದದೂರನ್ನು ದಾಖಲಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಮೃತ ಬಾಲಕಿಯ ಮೇಲೆ ನಡೆದ ಅತ್ಯಾಚಾರದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.