ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ತೆರಳಿ ಜನ್ಮದಿನದ ಶುಭ ಕೋರಿದರು.
ದೆಹಲಿಯ ಕೃಷ್ಣ ಮೆನನ್ ಮಾರ್ಗ್ನಲ್ಲಿ ಅಟಲ್ ಜೀ ಅವರ ನಿವಾಸವಿದ್ದು, ಬೆಳಿಗ್ಗೆ ಅಲ್ಲಿಗೆ ತೆರಳಿ ಮೋದಿ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ಈ ಇಬ್ಬರು ಗಣ್ಯರನ್ನು ಸ್ಮರಿಸಿದ್ದಾರೆ. ಜನಮ ದಿನದ ನಮನಗಳನ್ನು ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಟ್ವಿಟ್ ಮಾಡಿರುವ ಮೋದಿ, ‘ಅಟಲ್ ಜೀ ಅವರಿಗೆ ಜನಮದಿನದ ಶುಭ ಕಾಮನೆಗಳು. ಅವರ ದೂರದೃಷ್ಟಿತ್ವ ಮತ್ತು ನಾಯಕತ್ವ ದೇಶವನ್ನು ಅಭಿವೃದ್ಧಿಪಡಿಸಿದ್ದು ಮಾತ್ರವಲ್ಲ, ವಿಶ್ವ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಯನ್ನು ಎತ್ತಿ ಹಿಡಿದಿದೆ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಮತ್ತೋರ್ವ ದೇಶಪ್ರೇಮಿ ಮದನ್ ಮೋಹನ್ ಮಾಳವಿಯಾ ಅವರಿಗೂ ಜನುಮ ದಿನ ಶುಭಕೋರಿರುವ ಮೋದಿ, ‘ಮದನ್ ಮೋಹನ್ ಅವರ ಕೊಡುಗೆಗಳನ್ನು ಇಂದು ಸ್ಮರಿಸುತ್ತೇವೆ. ಭಾರತದ ಇತಿಹಾಸದ ಮೇಲೆ ಅವರ ಪ್ರಭಾವ ಅಚ್ಚಳಿಯದೆ ಉಳಿದಿದೆ. ಶಿಕ್ಷಣಕ್ಕಾಗಿನ ಹೋರಾಟ ಮತ್ತು ದೇಶಭಕ್ತಿಯನ್ನು ಸದಾ ಸ್ಮರಿಸುತ್ತೇವೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.