ಮಂಗಳೂರು : ಈಗ ಮಳೆಗಾಲ ಮತ್ತು ಮೀನುಗಳ ಸಂತಾನೋತ್ಪತ್ತಿಯ ಸಮಯವಾದುದರಿಂದ ಮೇ 31ರ ತಡರಾತ್ರಿಯಿಂದ ಜುಲೈ ಕೊನೆಯವರೆಗೆ ಅಂದರೆ ಸುಮಾರು 61 ದಿನಗಳ ಕಾಲ ಮೀನುಗಾರಿಕೆಗೆ ರಜೆ ಸಾರಲಾಗಿದೆ.
ಈ ವೇಳೆ ಮೀನುಗಾರರು ಮೀನು ಹಿಡಿಯಲು ಕಡಲಿಗೆ ಇಳಿಯುವಂತಿಲ್ಲ. ಆದೇಶ ಮೀರಿ ಯಾರಾದರು ಕಡಳಿಗಿಳಿದು ಏನಾದರೂ ಅನಾಹುತ ಮಾಡಿಕೊಂಡರೆ ಅದಕ್ಕೆ ಸರಕಾರ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈಗ ಮೀನುಗಳ ಸಂತಾನೋತ್ಪತ್ತಿ ಸಮಯವಾಗಿದ್ದು, ಯಾಂತ್ರೀಕೃತ ಬೋಟ್ ಮೂಲಕ ಮೀನುಗಾರಿಕೆ ನಡೆಸಿದರೆ ಮೀನಿನ ಸಂತತಿ ನಾಶವಾಗುತ್ತದೆ. ಆದುದರಿಂದ ಈ ಸಮಯದಲ್ಲಿ ಮೀನುಗಾರಿಕೆಗೆ ಅವಕಾಶ ನೀಡಲಾಗುವುದಿಲ್ಲ. ಈ ಸಮಯದಲ್ಲಿ ನಾಡದೋಣಿ ಬಳಸಿ ಮೀನುಗಾರಿಕೆ ನಡೆಸುವವರೂ ಇದ್ದಾರೆ. ಈ ಸಂದರ್ಭ ಬಲೆಗೆ ಬಿದ್ದ ಮೀನಿಗೆ ದುಬಾರಿ ಮೊತ್ತ ತೆತ್ತು ಖರೀದಿಸುವುದು ಅನಿವಾರ್ಯವಾಗಲಿದೆ.
ಈ ಹಿಂದೆ ಸಾಮಾನ್ಯವಾಗಿ 48 ದಿನಗಳ ರಜೆ ನೀಡಲಾಗುತ್ತಿದ್ದು ಪ್ರಸಕ್ತ ವರ್ಷ ಇದರ ಅವಧಿಯನ್ನು 61 ದಿನಕ್ಕೆ ವಿಸ್ತರಿಸಲಾಗಿದೆ.
ಈಗಾಗಲೇ ಬಹುತೇಕ ಬೋಟ್ಗಳು ಬಂದರು ಪ್ರದೇಶದಲ್ಲಿ ತನ್ನ ಕಾರ್ಯ ನಿಲ್ಲಿಸಿ ದಡ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.