ಪಾಟ್ನಾ: ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು 98 ವರ್ಷದ ರಾಜ್ಕುಮಾರ್ ವೈಶ್ ತೋರಿಸಿಕೊಟ್ಟಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಅವರು ಸ್ನಾತಕೋತ್ತರ ಪದವಿಯನ್ನು ಪಡೆದು ಇತರರಿಗೆ ಮಾದರಿ ಎನಿಸಿದ್ದಾರೆ.
ನಳಂದ ಮುಕ್ತ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ವೈಶ್ ಅವರಿಗೆ ಮೇಘಾಲಯ ರಾಜ್ಯಪಾಲ ಗಂಗಾ ಪ್ರಸಾದ್ ಅವರು ಸ್ನಾತಕೋತ್ತರ ಪದವಿಯನ್ನು ಪ್ರದಾನ ಮಾಡಿದರು.
2015ರಲ್ಲಿ ವೈಶ್ ಅವರು ಅರ್ಥಶಾಸ್ತ್ರದಲ್ಲಿ ಎಂಕಾಂ ಮಾಡಲು ನೋಂದಾವಣೆ ಮಾಡಿಕೊಂಡಿದ್ದರು. ಇದೀಗ ಅರ್ಥಶಾಸ್ತ್ರ ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ತುಂಬಾ ಶ್ರಮಪಟ್ಟು ಓದಿದ ಕಾರಣದಿಂದ ಪದವಿಯನ್ನು ಪೂರೈಸಿದೆ. ಯುವಕರು ಶಿಕ್ಷಣದತ್ತ ಹೆಚ್ಚು ಗಮನಹರಿಸಬೇಕು ಎಂದು ವೈಶ್ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.