ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ನೂತನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬುಧವಾರ ಸಿಎಂ ಜೈರಾಮ್ ಠಾಕೂರ್ ಸೇರಿದಂತೆ 10 ಸಚಿವರುಗಳು ಪ್ರಮಾಣವಚನ ಸ್ವೀಕಾರ ಮಾಡಿದರು. ಆದರೆ ಸುರೇಶ್ ಭಾರಧ್ವಜ್ ಎಂಬುವವರು ಸಂಸ್ಕೃತದಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದು ವಿಶೇಷವಾಗಿತ್ತು.
ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಗವರ್ನರ್ ಆಚಾರ್ಯ ದೇವ್ವೃತ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಭಾರಧ್ವಜ್ ಅವರು ಶಿಮ್ಲಾ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. 1990, 2007, 2012ರಲ್ಲೂ ಇವರು ಶಾಸಕರಾಗಿದ್ದರು. ಹಿಮಾಚಲಪ್ರದೇಶದ ವಿಧಾನಸಭಾ ಮುಖ್ಯಸ್ಥರಾಗಿಯೂ ಇವರನ್ನು ನಾಮನಿರ್ದೇಶನಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.