ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಒಳನುಸುಳಲು ಪ್ರಯತ್ನಿಸಿದ ಮೂವರು ಭಯೋತ್ಪಾದಕರು ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಅವರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿತ್ತು.
ಇದೀಗ ಸೋಮವಾರ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ಥಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡು ಹಾರಿಸುತ್ತಿದ್ದಾರೆ. ಬೆಳಿಗ್ಗೆಯಿಂದ ಆರಂಭವಾದ ಗುಂಡಿನ ಚಕಮಕಿ ಈಗಲೂ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಗಳು ಸಂಭವಿಸಿದ ವರದಿಯಾಗಿಲ್ಲ.
ನಿನ್ನೆ ಹತ್ಯೆಯಾದ ಉಗ್ರರ ಮೃತದೇಹ ಮತ್ತು ಅವರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿದೆ.
ಒಂದು ಕಡೆಯಿಂದ ಭಾರತದೊಳಗೆ ಉಗ್ರರನ್ನು ಒಳನುಸುಳಿಸಿ, ಇನ್ನೊಂದೆಡೆ ಕದನವಿರಾಮ ನಡೆಸುತ್ತಿರುವ ಪಾಕಿಸ್ಥಾನಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರವನ್ನೇ ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.