ನವದೆಹಲಿ: ಹೊಸ ವರ್ಷದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮನಾಥ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ,
ಟ್ವಿಟ್ ಮಾಡಿರುವ ಮೋದಿ, ‘ಎಲ್ಲರಿಗೂ ಸಂತೋಷದ 2018! ಈ ವರ್ಷ ಎಲ್ಲರ ಬದುಕಲ್ಲೂ ಸಮೃದ್ಧಿ, ಸಂತೋಷ, ಉತ್ತಮ ಆರೋಗ್ಯ ಬರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಕೋವಿಂದ್ ಅವರೂ ಟ್ವಿಟರ್ ಮೂಲಕ ಶುಭ ಕೋರಿದ್ದು, ’ಎಲ್ಲರಿಗೂ ಹೊಸವರ್ಷದ ಶುಭಾಶಯ. 2018 ನಿಮಗೆ, ನಿಮ್ಮ ಕುಟುಂಬಕ್ಕೆ, ದೇಶಕ್ಕೆ ಮತ್ತು ನಮ್ಮ ವಿಭಿನ್ನ-ಸುಂದರ ಜಗತ್ತಿಗೆ ನಗು, ಸ್ನೇಹ, ಸಮೃದ್ಧಿ ತರಲಿ’ ಎಂದಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.