ವಡೋದರಾ: ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ (ಎಐಬಿಇಎ) ಜೂನ್ 24ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಸಲು ತೀರ್ಮಾನಿಸಿದೆ.
ಸಾರ್ವಜನಿಕ ವಲಯಗಳ ಬ್ಯಾಂಕ್ ನೌಕರರ ಸಂಘಟನೆ(ಎಸ್ಎಸ್ಬಿಸಿಎ) ಅಧೀನದಲ್ಲಿ ಬರುವ ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಇದರ ಇತರ ಸಹ ಬ್ಯಾಂಕ್ಗಳು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಜೊತೆ ಸಹಯೋಗ ಹೊಂದಿದ್ದು, ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರಾಷ್ಟ್ರಾದ್ಯಂತ ಮುಷ್ಕರ ನಡೆಸಲಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಅದರ ಸಹ ಬ್ಯಾಂಕ್ಗಳ ನಡುವೆ ಸಂಪರ್ಕ ಮುಕ್ತಗೊಳಿಸುವುದು, ಸರಕಾರದ ಮಾರ್ಗಸೂಚಿಯಂತೆ ಸಹಾನುಭೂತಿಯ ನೇಮಕ ಯೋಜನೆ ವಿಸ್ತರಣೆ, ಕಾರ್ಮಿಕ ಒಕ್ಕೂಟಗಳ ಪ್ರಾತಿನಿಧ್ಯ ಹಕ್ಕುಗಳ ನಿರ್ಬಂಧ ಹೇರಿಕೆಯನ್ನು ಕೈಬಿಡುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.