ನವದೆಹಲಿ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ 1 ಕೋಟಿ ಗರ್ಭಿಣಿಯರ ತಪಾಸಣೆ ನಡೆಸಿದ ವೈದ್ಯರ ಕಾರ್ಯಕ್ಕೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟ್ವ್ವಿಟ್ ಮಾಡಿರುವ ಅವರು, ‘ಮಾತೃತ್ವ ಯೋಜನೆಯಡಿ 1 ಕೋಟಿ ತಪಾಸಣೆಗಳನ್ನು ಮಾಡಲಾಗಿದೆ. ಇದಕ್ಕಾಗಿ ವೈದ್ಯರನ್ನು ಅಭಿನಂದಿಸುತ್ತೇನೆ. ಮಹತ್ವದ ಮೈಲಿಗಲ್ಲನ್ನು ಅವರು ಸ್ಥಾಪಿಸಿದ್ದಾರೆ. ತಿಂಗಳ ಒಂದು ದಿನವನ್ನು ಉತ್ತಮ ಕಾರ್ಯಕ್ಕೆ ಬಳಸುವಂತೆ ಕರೆ ನೀಡಿದ ಪ್ರಧಾನಿ ಮಾತನ್ನು ಅವರು ನಡೆಸಿಕೊಟ್ಟಿದ್ದಾರೆ’ ಎಂದರು.
2016ರ ಜನವರಿ 6ರಂದು ಗರ್ಭಿಣಿಯರ ಆರೋಗ್ಯವನ್ನು ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನವನ್ನು ಆರಂಭಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.