ನವದೆಹಲಿ: ಮಿಲಿಟರಿ ಆಪರೇಶನ್ಗಳ ಆಯಾಮ ಮತ್ತು ಸವಾಲುಗಳು ಬದಲಾಗುತ್ತಿರುವ ಹಿನ್ನಲೆಯಲ್ಲಿ ಶಸ್ತ್ರಾಸ್ತ್ರ ಪಡೆಗಳನ್ನು ಆಧುನೀಕರಣಗೊಳಿಸುವ ಅಗತ್ಯತೆ ಇದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ದೆಹಲಿಯಲ್ಲಿ ಆರ್ಮಿ ಟೆಕ್ನಾಲಜಿ ಸೆಮಿನಾರ್ನ್ನು ಉದ್ದೇಶಿಸಿ ಮಾತನಾಡಿದ ಅವರು, ಆಮದುಗೊಂಡ ಶಸ್ತ್ರಾಸ್ತ್ರಗಳ ಮೇಲೆ ಅವಲಂಭಿತರಾಗುವುದನ್ನು ಕುಗ್ಗಿಸಬೇಕಾಗಿದೆ. ಮುಂಬರುವ ದಿನಗಳಲ್ಲಿ ದೇಶೀಯ ಶಸ್ತ್ರಾಸ್ತ್ರಗಳ ಮೂಲಕವೇ ಯುದ್ಧ ಮಾಡಬೇಕಿದೆ ಎಂದಿದ್ದಾರೆ.
ಮುಂಬರುವ ದಿನಗಳ ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನದಲ್ಲಿ ಮುಂದುವರೆದ ಪಡೆಗಳು ಮಾತ್ರ ಮಹತ್ವದ ಪಾತ್ರ ನಿಭಾಯಿಸುತ್ತವೆ. ನಮ್ಮ ಸೇನೆಯನ್ನು ಆಧುನೀಕರಣಗೊಳಿಸುವ ಅಗತ್ಯತೆ ಇದೆ ಎಂದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.