ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ‘ಮೇಕ್ ಇನ್ ಇಂಡಿಯಾ’ ಯೋಜನೆಯಲ್ಲಿ ಸಣ್ಣ ಉದ್ಯಮ ವಲಯಗಳನ್ನೂ ಒಳಪಡಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಖಾಸಗಿ ವಲಯಗಳಿಗೆ ಸೈನಿಕರ ಪರಿಕರಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಅವಕಾಶವನ್ನು ನೀಡಲಿದ್ದಾರೆ.
ಸೈನಿಕರಿಗೆ ವಿಶೇಷ ಸಾಕ್ಸ್, ಶೂ ಮುಂತಾದ ಹತ್ತು ಹಲವು ಉತ್ಪನ್ನಗಳನ್ನು ಖಾಸಗಿ ವಲಯಗಳು ಸ್ಥಳಿಯವಾಗಿ ಉತ್ಪಾದನೆ ಮಾಡಬಲ್ಲವು. ಪ್ರಸ್ತುತ ಇಂತಹ ವಸ್ತುಗಳನ್ನು ಹೆಚ್ಚಿನ ಬೆಲೆ ನೀಡಿ ನಾವು ವಿದೇಶದಿಂದ ತರಿಸಿಕೊಳ್ಳುತ್ತಿದ್ದೇವೆ ಎಂದು ಸಚಿವೆ ಹೇಳಿದ್ದಾರೆ.
ಮುಂದಿನ ವಾರ ಚೆನ್ನೈನಲ್ಲಿ ನಡೆಯಲಿರುವ ಕಾನ್ಕ್ಲೇವ್ನಲ್ಲಿ ಈ ಬಗ್ಗೆ ರಕ್ಷಣಾ ಸಚಿವಾಲಯ ವಿಶೇಷ ಘೋಷಣೆಯನ್ನು ಮಾಡುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.