ನವದೆಹಲಿ: ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ 2014-15 ಮತ್ತು ನವೆಂಬರ್ 2017ರ ನಡುವೆ ಬರೋಬ್ಬರಿ ರೂ.68,270 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ತಿಳಿಸಿದೆ.
ಸ್ವಚ್ಛ ಭಾರತ ಅಭಿಯಾನ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಅಮೃತ್ ಯೋಜನೆ, ರಾಷ್ಟ್ರೀಯ ಪಾರಂಪರಿಕ ನಗರ ಅಭಿವೃದ್ಧಿ ಮತ್ತು ವರ್ಧನೆ ಯೋಜನೆ, ಈಶಾನ್ಯ ಪ್ರದೇಶ ನಗರ ಅಭಿವೃದ್ಧಿ ಯೋಜನೆಗಳನ್ನು ಕೇಂದ್ರ ನಗರ ಪ್ರದೇಶದ ಅಭಿವೃದ್ಧಿಗಾಗಿ ಅನುಷ್ಠಾನಕ್ಕೆ ತಂದಿದೆ.
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ವರದಿಯ ಪ್ರಕಾರ ಈ ಎಲ್ಲಾ ಯೋಜನೆಗಳಿಗೆ ಕೇಂದ್ರ ಸರ್ಕಾರ 2014-15 ಮತ್ತು ನವೆಂಬರ್ 2017 ನಡುವೆ ಬರೋಬ್ಬರಿ ರೂ.68,270 ಕೋಟಿಗಳನ್ನು ಬಿಡುಗಡೆ ಮಾಡಿದೆ. ಉತ್ತರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ ಈ ಅನುದಾನ ಅತೀದೊಡ್ಡ ಫಲಾನುಭವಿಗಳು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.