ನವದೆಹಲಿ: ಕೇಂದ್ರ ಸರ್ಕಾರ ನೀಡುತ್ತಿರುವ ಸ್ವ ಉದ್ಯೋಗದ ಅವಕಾಶವನ್ನು ಯುವಕರು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರೆ ನೀಡಿದ್ದಾರೆ.
‘ಎಕನಾಮಿಕ್ ಡೆಮಾಕ್ರಸಿ ಕಾನ್ಕ್ಲೇವ್’ನಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕಾದರೆ ಯುವ ಜನತೆ ಉದ್ಯುಶೀಲತೆಯನ್ನು ಪಾಲ್ಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಮುದ್ರಾ, ಸ್ಟಾರ್ಟ್ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾದಂತಹ ಯೋಜನೆಗಳನ್ನು ಯುವಕರು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಯುವ ಉದ್ಯಮಿಗಳಿಗೆ, ಸ್ವ ಉದ್ಯೋಗಿಗಳಿಗೆ ಉತ್ತೇಜನ, ನೆಟ್ವರ್ಕಿಂಗ್, ಮಾನಿಟರಿಂಗ್ ನೀಡುವ ಸಲುವಾಗಿ ಕಾನ್ಕ್ಲೇವ್ ಆಯೋಜನೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.