ನವದೆಹಲಿ: ಭಾರತೀಯ ಸೇನಾಪಡೆ ಇಂದು ತನ್ನ 70ನೇ ಸೇನಾ ದಿನವನ್ನು ಆಚರಿಸುತ್ತಿದೆ. ಇದರ ಅಂಗವಾಗಿ ದೆಹಲಿಯಲ್ಲಿ ವಾರ್ಷಿಕ ಸೇನಾ ಪರೇಡ್ ಜರಗಿತು. ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇದರ ಪರಿವೀಕ್ಷಣೆ ಮಾಡಿದರು.
ಈ ಸಂದರ್ಭ ಸಾಹಸ ಮೆರೆದ ಹಲವಾರು ವೀರ ಸೈನಿಕರಿಗೆ ಶೌರ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ದೇಶದ ವಿವಿಧ ಭಾಗಗಳಲ್ಲಿರುವ ಸೇನೆಯ ಕೇಂದ್ರ ಕಛೇರಿಗಳಲ್ಲೂ ಸೈನಿಕರ ಪರೇಡ್, ಸಮಾರಂಭ ಜರುಗಿತು.
1949ರ ಜನವರಿ.15ರಂದು ಜನರಲ್ ಕಾರಿಯಪ್ಪನವರು ಸೇನಾಪಡೆಯ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಅಂದಿನಿಂದ ಪ್ರತಿವರ್ಷ ಜ.15ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.