ನವದೆಹಲಿ: ಹಜ್ ಯಾತ್ರೆಯನ್ನು ಕೈಗೊಳ್ಳುವ ಸಲುವಾಗಿ ಪ್ರತಿವರ್ಷ ಮುಸ್ಲಿಂ ಧರ್ಮಿಯರಿಗೆ ನೀಡುತ್ತಿದ್ದ ಕೋಟಿಗಟ್ಟಲೆ ಹಜ್ ಹಣವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.2018ರಿಂದ ಹಜೆ ಯಾತ್ರೆಗೆ ಸಬ್ಸಿಡಿ ಸಿಗುವುದಿಲ್ಲ.
2012ರಲ್ಲಿ ಸುಪ್ರೀಂಕೋರ್ಟ್ ಕೂಡ ಹಜ್ ಸಬ್ಸಿಡಿ ನಿಲ್ಲಿಸಲು ಸೂಚನೆ ನೀಡಿತ್ತು. ಮುಸ್ಲಿಮರ ಓಲೈಕೆಗಾಗಿ ಆರಂಭಿಸಲಾಗಿದ್ದ ಈ ಸಬ್ಸಿಡಿಯನ್ನು ನಿಲ್ಲಿಸಲು ಹಿಂದಿನ ಯಾವುದೇ ಸರ್ಕಾರಗಳು ಪ್ರಯತ್ನಿಸಿರಲಿಲ್ಲ. ಆದರೆ ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದಿಟ್ಟ ಕ್ರಮವನ್ನೇ ಕೈಗೊಂಡಿದೆ.
ಹಜ್ ಸಬ್ಸಿಡಿಯ ಹಣವನ್ನು ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸದ್ಭಳಕೆ ಮಾಡುತ್ತೇವೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದನ್ನು ಬಿಟ್ಟು ಅವರ ನಿಜವಾದ ಸಬಲೀಕರಣಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.