ನವದೆಹಲಿ: ಇದೇ ಮೊದಲ ಬಾರಿಗೆ ದೇಶದ 15 ಯೂನಿವರ್ಸಿಟಿಗಳಿಗೆ ಆನ್ಲೈನ್ ಮೂಲಕ ಡಿಗ್ರಿ ಕೋರ್ಸ್ಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಯಾವುದೇ ಸ್ಥಳದಿಂದ, ಯಾವುದೇ ಸಮಯದಲ್ಲೂ ಪದವಿ ಪಡೆದುಕೊಳ್ಳಬಹುದಾಗಿದೆ.
ಇವುಗಳು ತಾಂತ್ರಿಕವಲ್ಲದ ಕೋರ್ಸ್ಗಳಾಗಿದ್ದು, ಎಂಜಿನಿಯರಿಂಗ್, ವೈದ್ಯಕೀಯ, ಮಾನವ ಸಂಪನ್ಮೂಲ ಕೋರ್ಸ್ಗಳನ್ನು ಇದು ಒಳಗೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.
ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇವುಗಳು ವಿಫಲವಾಗಬಹುದು ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಆದರೂ ಈ ನಿರ್ಧಾರದಿಂದ ಉನ್ನತ ವ್ಯಾಸಂಗ ಮಾಡುವವರ ನೋಂದಣಿಯಲ್ಲಿ ಹೆಚ್ಚಾಗಬಹುದು ಎಂಬ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.