ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿರುವ ಓಂ ಪ್ರಕಾಶ್ ರಾವತ್ ಅವರು ಇಂದಿನಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನಿನ್ನೆಯಷ್ಟೇ ಎ.ಕೆ ಜ್ಯೋತಿ ಅವರು ನಿವೃತ್ತರಾಗಿದ್ದರು, ಅವರ ಜಾಗವನ್ನು ರಾವತ್ ಅಲಂಕರಿಸಲಿದ್ದಾರೆ, ಇವರ ಅಧಿಕಾರವಧಿ ಈ ವರ್ಷದ ಡಿಸೆಂಬರ್ನಲ್ಲಿ ಅಂತ್ಯವಾಗಲಿದೆ.
1953ರ ಡಿ.2ರಂದು ಜನಿಸಿರುವ ರಾವತ್ ಮಧ್ಯಪ್ರದೇಶ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದಾರೆ.
2015ರಲ್ಲಿ ಇವರು ಚುನಾವಣಾ ಆಯುಕ್ತರಾಗಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ಭರ್ತಿ ಪಡೆದುಕೊಂಡಿದ್ದಾರೆ.
ಉಳಿದಂತೆ ಸುನೀಲ್ ಅರೋರ ಮತ್ತು ಅಶೋಕ್ ಲಾವಸ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.