ನವದೆಹಲಿ: ಹಿರಿಯ ರಾಜತಾಂತ್ರಿಕ ವಿಜಯ್ ಕೇಶವ್ ಗೋಖಲೆ ಅವರು ಸೋಮವಾರ ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದರು.
ಜ.28ರಂದು ಅಧಿಕಾರ ಪೂರೈಸಿದ ಡಾ.ಸುಬ್ರಹ್ಮಣ್ಯಂ ಜೈಶಂಕರ್ ಅವರ ಜಾಗವನ್ನು ಗೋಖಲೆ ವಹಿಸಿಕೊಂಡಿದ್ದಾರೆ.
ಈ ಹಿಂದೆ ಗೋಖಲೆ ಅವರು ವಿದೇಶಾಂಗ ಸಚಿವಾಲಯದ ಆರ್ಥಿಕ ಸಂಬಂಧಿತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
1981ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಇವರು, 2016ರ ಜನವರಿ 20ರಿಂದ 2017ರ ಅಕ್ಟೋಬರ್ 21ರವರೆಗೆ ಭಾರತದ ಚೀನಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.