ನವದೆಹಲಿ: ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ನ ಘುಲಾಮ್ ನಬಿ ಆಜಾದ್, ಟಿಎಂಸಿಯ ದಿನೇಶ್ ತ್ರಿವೇದಿ, 2013ರಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಪ್ರಸ್ತುತ ಮಣಿಪುರದ ರಾಜ್ಯಪಾಲೆಯಾಗಿರುವ ನಜ್ಮಾ ಹೆಫ್ತುಲ್ಲಾ, ಬಿಜೆಪಿ ಲೋಕಸಭಾ ಸಂಸದ ಹುಕುಂದೇವ್ ನಾರಾಯಣ್ ಯಾದವ್, 5 ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಡಿಯ ಬಾರ್ತೃಹರಿ ಮಹತಬ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಇಂಡಿಯನ್ ಪಾರ್ಲಿಮೆಂಟರಿ ಗ್ರೂಪ್ ಈ ಆಯ್ಕೆ ಮಾಡಿದೆ.
1995ರಿಂದ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಯನ್ನು ಕೊಡಲಾಗುತ್ತಿದೆ. ಇದುವರೆಗೆ 18 ಸಂಸದರು ಈ ಪ್ರಶಸ್ತಿ ಗೌರವ ಪಡೆದುಕೊಂಡಿದ್ದಾರೆ.
ಸಮಾಜವಾದಿ ಜನತಾ ಪಕ್ಷದ ಚಂದ್ರಶೇಖರ್ ಅವರನ್ನು ಈ ಪ್ರಶಸ್ತಿ ಪಡೆದ ಮೊದಲಿಗ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.