×
Home About Us Advertise With s Contact Us

ಶಾರದಾ ಪ.ಪೂ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಗಮ

ಮಂಗಳೂರು : ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಸಮಾಜದಲ್ಲಿ ಸದಭಿಪ್ರಾಯವನ್ನು ಮೂಡಿಸುವಲ್ಲಿ ಆ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಅವರ ಉತ್ತಮ ನಡೆ, ನುಡಿ, ವರ್ತನೆ, ಸಭ್ಯತೆ, ಸಂಸ್ಕಾರ ಇತ್ಯಾದಿಗಳಿಂದ ಅವರು ಕಲಿತ ಶಿಕ್ಷಣ ಸಂಸ್ಥೆಗೂ ಉತ್ತಮ ಹೆಸರು ಬರುತ್ತದೆ. ಮಾತ್ರವಲ್ಲ ಅವರು ಸಮಾಜದ ಇತರ ಮಂದಿಗೆ ತಾವು ಕಲಿತ ಶಿಕ್ಷಣ ಸಂಸ್ಥೆಯ ಬಗ್ಗೆ ಉತ್ತಮ ಮಾಹಿತಿಯನ್ನು ನೀಡುವ ಮೂಲಕ ಆ ಶಿಕ್ಷಣ ಸಂಸ್ಥೆಯ ಪ್ರಚಾರ ರಾಯಭಾರಿಗಳಾಗಿಯೂ ಕೆಲಸ ಮಾಡುತ್ತಾರೆ ಎಂದು ಶಾರದಾ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ| ಲೀಲಾ ಉಪಾಧ್ಯಾಯ ಅವರು ಹೇಳಿದರು. ಅವರು ಶಾರದಾ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ನಡೆದ ’ಹಳೆ ವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹಾಬಲೇಶ್ವರ ಭಟ್ ಸೊಡಂಕೂರು ಮತ್ತು ಶಾರದಾ ಕಾಲೇಜಿನ ಪ್ರಾಂಶುಪಾಲರಾದ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳಾಗಿ ಡಾ| ಅನಂತ ಪ್ರಸಾದ್ ರಾವ್ (ಅಧ್ಯಕ್ಷರು), ಶರತ್ (ಉಪಾಧ್ಯಕ್ಷ), ಮಹಮ್ಮದ್ ಝಾಹಿರ್ (ಕೋಶಾಧಿಕಾರಿ) ಇವರನ್ನು ಆರಿಸಲಾಯಿತು.

ಕಾರ್ಯಕ್ರಮದ ಮೊದಲಿಗೆ ಶಾರದಾ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಸಂಯೋಜಕರಾದ ಶ್ರೀ ಪ್ರಕಾಶ್ ನಾಕ್ ಸ್ವಾಗತಿಸಿ ಕೊನೆಯಲ್ಲಿ ಭೌತಶಾಸ್ತ್ರ ಉಪನ್ಯಾಸಕಿ ಕು| ಸುಶ್ಮಿತಾ ಎಂ. ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹಳೆ ವಿದ್ಯಾರ್ಥಿಗಳು ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

 

Recent News

Back To Top
error: Content is protected !!