ಹೈದರಾಬಾದ್: ಆಂಧ್ರಪ್ರದೇಶ ವಿಭಜನೆಯಾಗಿ ನೂತನ ಆಂಧ್ರ ರಚನೆಯಾದ ಒಂದು ವರ್ಷವನ್ನು ಸ್ಮರಿಸುವುದಕ್ಕಾಗಿ ಮಂಗಳವಾರ(ಜೂನ್ 2) ಆಂಧ್ರಪ್ರದೇಶದಲ್ಲಿ ‘ನವ ನಿರ್ಮಾಣ್ ದೀಕ್ಷಾ’ ದಿನವನ್ನು ಆಚರಿಸಲಾಗುತ್ತಿದೆ.
ಆಂಧ್ರ ಜನತೆಯ ಇಚ್ಛೆಗೆ ವಿರುದ್ಧವಾಗಿ ರಾಜ್ಯವನ್ನು ವಿಭಾಗಿಸಿ ತೆಲಂಗಾಣವನ್ನು ಪ್ರತ್ಯೇಕಗೊಳಿಸಲಾಯಿತು. ಹೀಗಾಗಿ ಈ ದಿನವನ್ನು ‘ನವ ನಿರ್ಮಾಣ’ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಆಂಧ್ರವನ್ನು ಅಭಿವೃದ್ಧಿಯ ಹಾದಿಯಲ್ಲಿ ಹೊಸದಾಗಿ ನಿರ್ಮಾಣ ಮಾಡುವ ಗುರಿಯೊಂದಿಗೆ ‘ನವ ನಿರ್ಮಾಣ ದೀಕ್ಷಾ’ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಹಿನ್ನಲೆಯಲ್ಲಿ ಇಂದು ವಿಜಯವಾಡದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.