ನವದೆಹಲಿ: ಅಯೋಧ್ಯಾ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಬಗೆಗೆ ಅಲಾಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶರಾದ ಅಶೋಕ್ ಭೂಷಣ್, ನ್ಯಾ, ಎಸ್.ಅಬ್ದುಲ್ ನಝೀರ್ ಅವರು ಗುರುವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು 12 ಪಿಟಿಷನ್ಗಳ ವಿಚಾರಣೆ ನಡೆಸಲಿದ್ದಾರೆ.
ಅಯೋಧ್ಯಾ ಪ್ರಕರಣದ ಕೊನೆಯ ವಿಚಾರಣೆ 2017ರ ಡಿ.5ರಂದು ನಡೆದಿತ್ತು, ಈ ವೇಳೆ ಯುಪಿ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಕಪಿಲ್ ಸಿಬಲ್ ಅವರು ವಿಚಾರಣೆಯನ್ನು 2019ಕ್ಕೆ ಮುಂದೂಡಬೇಕೆಂದು ಕೇಳಿಕೊಂಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.