ಬೆಂಗಳೂರು: ಮಠ, ಮಂದಿರಗಳನ್ನು ಧಾರ್ಮಿಕ ದತ್ತಿ ಕಾಯ್ದೆಯಡಿ ತರಲು ರಾಜ್ಯ ಸರ್ಕಾರ ನಡೆಸುತ್ತಿರುವ ಹುನ್ನಾರಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಹಿಂದೂ, ಜೈನ, ಸಿಖ್, ಬೌದ್ಧ ಧರ್ಮಗಳಿಗೆ ಸೇರಿದ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ದತ್ತಿ ಕಾಯ್ದೆಯಡಿ ತರುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯವ, ಸಲಹೆಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿದೆ.
ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ವಿವಿಧ ಮಠಾಧೀಶರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರಕಟನೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.
ಸರ್ಕಾರದ ಕ್ರಮವನ್ನು ಬಿಜೆಪಿ ಖಂಡಿಸಿದ್ದು, ಮಠ, ಮಂದಿರಗಳ ಮೇಲೆ ಕೈ ಇಟ್ಟರೆ ಭಸ್ಮ ಆಗುತ್ತೀರಿ ಎಂದಿದೆ. ಅಲ್ಲದೇ ಮಸೀದಿಗಳ ಪ್ರಸ್ತಾಪ ಯಾಕೆ ಇಲ್ಲ ಎಂದು ಪ್ರಶ್ನಿಸಿದೆ.
ಆದರೆ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಹೈಕೋರ್ಟ್ ಆದೇಶದಂತೆ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ ಎಂದಿದೆ.
ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆಯವರೂ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.