ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವಿಯಾ ಅವರಿಗೆ ಸೋಮವಾರ ಮರಣೋತ್ತರ ‘ಭಾರತ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಲಾಗಿದೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಳವಿಯಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿದರು. ಮಾಳವಿಯಾ ಅವರ ಕುಟುಂಬ ಸದಸ್ಯರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಶಿಕ್ಷಣತಜ್ಞರಾಗಿದ್ದ ಮಾಳವಿಯಾ ಅವರು ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸಂಸ್ಥಾಪಕ. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಇವರು ಮಂದಗಾಮಿ ಮತ್ತು ತೀವ್ರಗಾಮಿಗಳ ನಡುವಣ ಕೊಂಡಿಯಂತಿದ್ದರು. ಹಿಂದೂ ರಾಷ್ಟ್ರವಾದಿಯಾಗಿದ್ದ ಇವರು ಸಾಮಾಜಿಕ ಚಿಂತಕರಾಗಿದ್ದರು.
50 ವರ್ಷಗಳ ಕಾಲ ಕಾಂಗ್ರೆಸ್ಗೆ ಸೇವೆ ಸಲ್ಲಿಸಿದ ಇವರು 4 ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲಹಾಬಾದ್ನಲ್ಲಿ 1861ರಲ್ಲಿ ಜನಿಸಿದ ಇವರು ಶಿಕ್ಷಕರಾಗಿ ತಮ್ಮ ಕಾರ್ಯವನ್ನು ಆರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.