ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಕರಣ್ ನಗರ್ ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸಲು ಯತ್ನಿಸಿದ್ದ ಉಗ್ರರರ ವಿರುದ್ಧದ ಕಾರ್ಯಾಚರಣೆ ಸದ್ಯಕ್ಕೆ ಮುಕ್ತಾಯವಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಶ್ಮೀರ ಐಜಿಪಿ ಎಸ್ಪಿ ಪಾಣಿ ಅವರು, 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಲಷ್ಕರ್ ಇ ತೋಯ್ಬಾ ಸಿಆರ್ಪಿಎಫ್ ಕ್ಯಾಂಪ್ ದಾಳಿ ಯತ್ನ ನಡೆಸಿದೆ’ ಎಂದಿದ್ದಾರೆ.
ಕಾರ್ಯಾಚರಣೆಯಲ್ಲಿ ಒರ್ವ ಯೋಧನಿಗೆ ಗಾಯವಾಗಿದ್ದು, ಅವರೀಗ ಅಪಾಯದಿಂದ ಹೊರಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೋಮವಾರದಿಂದ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿಗಳು ನಡೆಯುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.