ಬಳ್ಳಾರಿ: ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಸಾರುವ ಹಂಪಿಯನ್ನು ದೇಶದ ‘ಐಕಾನಿಕ್ ಟೂರಿಸ್ಟ್ ಸೈಟ್’ನ್ನಾಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಸಮಗ್ರ ಮೂಲಸೌಕರ್ಯ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ದೇಶದ 10 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದಾಗಿ ಮತ್ತು ಪುರಾತತ್ವ ಇಲಾಖೆಯ 100 ಆದರ್ಶ ಶಿಲಾ ಶಾಸನಗಳಲ್ಲಿ ಟೂರಿಸ್ಟ್ ಸೌಲಭ್ಯಗಳನ್ನು ಅಪ್ಗ್ರೇಡ್ ಮಾಡುವುದಾಗಿ ಬಜೆಟ್ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದರು.
ಇದೀಗ ಆಯ್ಕೆಗೊಂಡ ಪ್ರವಾಸಿ ತಾಣಗಳನ್ನು ಘೋಷಣೆ ಮಾಡಲಾಗಿದ್ದು, ಇವುಗಳಲ್ಲಿ ರಾಜ್ಯದ ಹಂಪಿಯೂ ಒಂದಾಗಿದೆ.
ಈ ಪ್ರವಾಸಿ ತಾಣಗಳಲ್ಲಿ ಟಾಯ್ಲೆಟ್ ವ್ಯವಸ್ಥೆ, ಕುಡಿಯುವ ನೀರು, ಕುಳಿತುಕೊಳ್ಳುವ ಆಸನ, ಪಾಥ್ವೇ, ವಿಕಲ ಚೇತನರಿಗಾಗಿ ರ್ಯಾಂಪ್, ಕಸದಬುಟ್ಟಿ, ಸುಧಾರಿತ ಪಾರ್ಕಿಂಗ್ ವ್ಯವಸ್ಥೆ, ಟಿಕೆಟ್ ಕೌಂಟರ್, ಲ್ಯಾಂಡ್ಸ್ಕೇಪಿಂಗ್ ಇತ್ಯಾದಿ ಅಭಿವೃದ್ಧಿ ಕಾರ್ಯ ನಡೆಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.