ಬೆಂಗಳೂರು: ವಿಧಾನಸಭಾ ಚುನಾವಣೆಗೆ ಎದುರು ನೋಡುತ್ತಿರುವ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರದಿಂದಲೇ ಪ್ರಚಾರ ಕಾರ್ಯ ಆರಂಭ ಮಾಡಲಿದ್ದಾರೆ. 23 ದಿನದಲ್ಲಿ ಅವರು ಒಟ್ಟು 4 ಸಮಾವೇಶಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತದಲ್ಲಿರುವ 5 ರಾಜ್ಯಗಳಲ್ಲಿ ಕಾಂಗ್ರೆಸ್ ಒಂದಾಗಿದ್ದು, ಇಲ್ಲಿ ಅಧಿಕಾರ ಉಳಿಸುವುದು ಕಾಂಗ್ರೆಸ್ಗೆ ಅತೀ ಮುಖ್ಯ. ಇನ್ನೊಂದೆಡೆ ಬಿಜೆಪಿಗೂ ದಕ್ಷಿಣ ಭಾರತದ ಒಂದು ರಾಜ್ಯವನ್ನಾದರೂ ಗೆಲ್ಲುವ ಅಭಿಲಾಷೆ ಇದೆ.
ಫೆ.19ರಂದು ಮೈಸೂರಿನಿಂದ ಮೋದಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬಳಿಕ ಫೆ.27ರಂದು ದಾವಣಗೆರೆಯಲ್ಲಿ, ಮಾ.4ರಂದು ವಿಜಯಪುರ, ಮಾ.13ರಂದು ರಾಯಚೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.