ಹೈದರಾಬಾದ್: ಅಪ್ರಾಪ್ತ ಚಾಲಕರನ್ನು ನಿಯಂತ್ರಿಸುವ ಸಲುವಾಗಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಕಠಿಣ ಅಭಿಯಾನವೊಂದನ್ನು ಆರಂಭಿಸಿದ್ದಾರೆ.
ನಗರದಲ್ಲಿ ಅಪ್ರಾಪ್ತ ಚಾಲಕರ ಹಾವಳಿ ಹೆಚ್ಚಾಗಿದೆ. ವಾಹನಗಳನ್ನು ಓಡಿಸಿಕೊಂಡು ಇವರು ತಮ್ಮ ಹಾಗೂ ಇತರರ ಜೀವಕ್ಕೆ ಎರವಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ.
14 ವರ್ಷದಿಂದ 16 ವರ್ಷ ವಯಸ್ಸಿನ ಅಪ್ರಾಪ್ತ ಚಾಲಕರನ್ನು ಗುರುತಿಸಿ ಅವರಿಗೆ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ಇದುವರೆಗೆ ಒಟ್ಟು 30 ಇಂತಹ ಚಾಲಕರನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಹೈದರಾಬಾದ್ದಲ್ಲಿ 130 ಅಪ್ರಾಪ್ತ ಚಾಲಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.