ಸೌದಿ: ಕಟ್ಟರ್ ಇಸ್ಲಾಮಿಕ್ ರಾಷ್ಟ್ರವಾಗಿರುವ ಸೌದಿಯಲ್ಲಿ ಮನೋರಂಜನೆ, ಕಲೆಗಳಿಗೆ ಕಟ್ಟುನಿಟ್ಟಿನ ನಿಯಂತ್ರಣವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ರಾಷ್ಟ್ರ ಆಧುನಿಕ ಶೈಲಿಗೆ ತನ್ನನ್ನು ತಾನು ತೆರೆದುಕೊಳ್ಳಲಾರಂಭಿಸಿದೆ.
ಈಗಾಗಲೇ ಮಹಿಳೆಯರಿಗೆ ಚಾಲನಾ ಪರವಾನಗಿ, ಓದುವ ಅವಕಾಶ, ಪುರುಷನಿಲ್ಲದೆ ಓಡಾಡುವ ಅವಕಾಶ ನೀಡಲಾಗಿದೆ. ಸಿನಿಮಾ ಟಾಕೀಸ್ ಕೂಡ ತೆರೆಯಲು ಅವಕಾಶ ಸಿಕ್ಕಿದೆ. ಇದೀಗ ಅಲ್ಲಿ ಅಂತಾರಾಷ್ಟ್ರೀಯ ಮಟ್ಟದ ಫ್ಯಾಶನ್ ಶೋ ಆಯೋಜನೆಗೊಳ್ಳುತ್ತಿದೆ.
ಮಾ.26ರಿಂದ 31ರವರೆಗೆ ರಿಯಾದ್ನಲ್ಲಿ ‘ಅರಬ್ ಫ್ಯಾಶನ್ ವೀಕ್’ ನಡೆಯಲಿದೆ, ಇದರ 2ನೇ ಸುತ್ತು ಅಕ್ಟೋಬರ್ನಲ್ಲಿ ನಡೆಯಲಿದೆ. ಯಾವ ರೀತಿಯ ವಸ್ತ್ರಸಂಹಿತೆ ಇರಲಿದೆ ಎಂಬ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆಧುನಿಕ ವಸ್ತ್ರಗಳ ಪ್ರದರ್ಶನ ನಡೆಯಲಿದೆ ಎಂದಷ್ಟೇ ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.