ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ಮೂಲಕ ಉಚಿತವಾಗಿ ಪ್ರಯಾಣವನ್ನು ಮಾಡಬಹುದಾಗಿದೆ.
ಮಾ.1ರಿಂದ ಪರೀಕ್ಷೆ ಆರಂಭಗೊಳ್ಳುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆಂದು ಪ್ರಯಾಣವನ್ನು ಉಚಿತಗೊಳಿಸಲಾಗಿದೆ.
ನಿರ್ವಾಹಕರಿಗೆ ಹಾಲ್ ಟಿಕೆಟ್ನ್ನು ತೋರಿಸಿ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಸೆಟಲ್, ಎಕ್ಸ್ಪ್ರೆಸ್, ಲೋಕಲ್ ಕೆಎಸ್ಆರ್ಟಿಸಿಗಳಲ್ಲಿ ಈ ಸೌಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.