ನವದೆಹಲಿ: ಸಾರ್ವಜನಿಕರ ಹಣವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಣಕಾಸು ಅವ್ಯವಹಾರದ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
4ನೇ ಜಾಗತಿಕ ಉದ್ಯಮ ಸಮಿತ್ನಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಿದೆ ಎಂಬುದನ್ನು ನಾನು ಇಲ್ಲಿ ಸ್ಪಷ್ಟಪಡಿಸುತ್ತೇನೆ. ಸಾರ್ವಜನಿಕರ ಹಣ ಲೂಟಿಗೆ ಬಿಡವುದಿಲ್ಲ’ ಎಂದಿದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.