ನವದೆಹಲಿ: ಭಾರತೀಯ ರೈಲ್ವೇಯು ದೇಶದಾದ್ಯಂತ ಸುಮಾರು 200 ರೈಲು ನಿಲ್ದಾಣಗಳಲ್ಲಿ ಸ್ಯಾನಿಟರಿ ಪ್ಯಾಡ್ ಡಿಸ್ಪೆನ್ಸರಿ ಮತ್ತು ಇನ್ಸಿನರೇಟರ್ಗಳನ್ನು ಅಳವಡಿಸಲು ನಿರ್ಧರಿಸಿದೆ. ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ.8ರೊಳಗೆ ಇವುಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಳ್ಳಲಿದೆ.
ರೈಲ್ವೇ ವುಮೆನ್ ವೆಲ್ಫೇರ್ ಸೆಂಟ್ರಲ್ ಆರ್ಗನೈಝೇಶನ್ ‘ದಸ್ತಕ್’ ಎಂಬ ಉತ್ಪಾದನ ಯುನಿಟ್ನಲ್ಲಿ ಸ್ಯಾನಿಟರಿ ಪ್ಯಾಡ್ಗಳ ಉತ್ಪಾದನಾ ಕಾರ್ಯವನ್ನು ಮಾಡುತ್ತಿದೆ. ಇಲ್ಲಿಗೆ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ನವದೆಹಲಿ ಮತ್ತು ಭೋಪಾಲ್ನಲ್ಲಿ ಸ್ಯಾನಿಟರಿ ಪ್ಯಾಡ್ ಡಿಸ್ಪೆನ್ಸರಿಗಳನ್ನು ಅಳವಡಿಸಲಾಗಿದೆ, ಇದನ್ನು ದೇಶದ ಇತರ ಭಾಗಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದು ಶ್ಲಾಘನೀಯ ಕ್ರಮ. ಇದು ರೈಲಿನ ಮಹಿಳಾ ಸಿಬ್ಬಂದಿ, ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.