ನವದೆಹಲಿ: ಕೇಪ್ ಟೌನ್ನಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳು ಜಂಟಿಯಾಗಿ ರೂ.5.5ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿದೆ.
ಕಳೆದ ಭಾನುವಾರ ನ್ಯೂಜಿಲ್ಯಾಂಡ್ನಲ್ಲಿ ನಡೆದ ಪಂದ್ಯದ ವೇಳೆ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ಫಫ್ ಡು ಪ್ಲೆಸಿಸ್ ಅವರು ಜಂಟಿಯಾಗಿ ಉಭಯ ತಂಡಗಳ ಪರವಾಗಿ ಚೆಕ್ನ್ನು ನೀಡಿದರು.
ಉಭಯ ತಂಡಗಳೂ ಕೇಪ್ ಟೌನ್ನ ನೀರಿನ ಸಮಸ್ಯೆಯನ್ನು ಅನುಭವಿಸಿವೆ. ಈ ಬಗ್ಗೆ ವಿರಾಟ್ ಜೊತೆ ನಾನು ಮಾತನಾಡಿದೆ. ಬಳಿಕ ಕೆಲವೊಂದು ಜೆರ್ಸಿಗಳಿಗೆ ಸಹಿ ಹಾಕಿ ಅವುಗಳನ್ನು ಹರಾಜಿಗಿಟ್ಟೆವು. ಅದರಿಂದ ಬಂದ ಹಣವನ್ನು ಕೇಪ್ಟೌನ್ ನೀರಿನ ಸಮಸ್ಯೆ ನಿವಾರಣೆಗೆ ನೀಡಿದೆವು ಎಂದು ಡು ಪ್ಲೆಸಿಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.