ನವದೆಹಲಿ; ಬಣ್ಣಗಳ ಹಬ್ಬ ಹೋಳಿಯನ್ನು ಇಂದು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಜನತೆಗೆ ಹೋಳಿ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ನಾಡಿನ ಜನತೆಗೆ ಈ ಹಬ್ಬ ಶಾಂತಿ, ಸಂತೋಷ, ಸಮೃದ್ಧಿಯನ್ನು ತರಲಿ ಎಂದು ಆಶಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ‘ಹೋಳಿ ಪಾವನ ಪರ್ವದ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಕಾಮನೆಗಳು. ಬಣ್ಣಗಳ ಹಬ್ಬ ಹೋಳಿ ಸಮಾಜದ ಭಾತೃತ್ವವನ್ನು ಸಾರುತ್ತದೆ. ಈ ಹಬ್ಬ ಎಲ್ಲರ ಬದುಕಿಗೂ ಸುಖ, ಶಾಂತಿ, ಸಮೃದ್ಧಿಯನ್ನು ತರಲು’ ಎಂದಿದ್ದಾರೆ.
ಹೋಳಿ ಹಿನ್ನಲೆಯಲ್ಲಿ ದೇಗುಲಗಳಿಗೆ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.