ನವದೆಹಲಿ: ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ಪತ್ನಿ ಸಮೇತ ಶುಕ್ರವಾರ ರಾತ್ರಿ ನಾಲ್ಕು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡರು. ಹಿರಿಯ ಅಧಿಕಾರಿಗಳ ನಿಯೋಗದೊಂದಿಗೆ ಅವರು ಆಗಮಿಸಿದ್ದಾರೆ.
ಮ್ಯಾಕ್ರೋನ್ ಆಗಮನದ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ‘ಭಾರತಕ್ಕೆ ಸ್ವಾಗತ, ನಿಮ್ಮ ಭೇಟಿ ಭಾರತ ಮತ್ತು ಫ್ರಾನ್ಸ್ ನಡುವಣ ದ್ವಿಪಕ್ಷೀಯ ಸಂಬಂಧಕ್ಕೆ ಮತ್ತಷ್ಟು ಬಲ ತುಂಬಲಿದೆ. ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.
ಮ್ಯಾಕ್ರೋನ್ ಭೇಟಿಯ ವೇಳೆ ಉಭಯ ದೇಶಗಳು ಮಾರಿಟೈಮ್ ಸೆಕ್ಯೂರಿಟಿ, ಭಯೋತ್ಪಾದನ ವಿರೋಧಿ ಕಾರ್ಯಾಚರಣೆ ಮುಂತಾದ ಹತ್ತು ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿವೆ. ಜೈತಾಪುರ್ ನ್ಯೂಕ್ಲಿಯರ್ ಪವರ್ ಪ್ಲಾಂಟ್ ಬಗ್ಗೆ ಒಪ್ಪಂದಕ್ಕೆ ಸಹಿ ಬೀಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.