ಜೈಪುರ: 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೆಲೆ ಅತ್ಯಾಚಾರ ನಡೆಸುವ ಕ್ರೂರಿಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ರಾಜಸ್ಥಾನ ವಿಧಾನಸಭೆಯಲ್ಲಿ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಒಂದು ಬಾರಿ ಈ ಮಸೂದೆ ಕಾನೂನಾಗಿ ಪರಿವರ್ತನೆಗೊಂಡರೆ, ಮಕ್ಕಳ ಅತ್ಯಾಚಾರಿಗಳಿಗೆ ಸಾವೇ ಗತಿಯಾಗಲಿದೆ. ಮಧ್ಯಪ್ರದೇಶದಲ್ಲೂ ಈ ಕಾನೂನು ಜಾರಿಯಲ್ಲಿದ್ದು, ರಾಜಸ್ಥಾನ ಈ ಮಸೂದೆ ತಂದ ಎರಡನೇ ರಾಜ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜಸ್ಥಾನ ಸರ್ಕಾರ ಈ ಕಠಿಣ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ.
ಹರಿಯಾಣ ಸರ್ಕಾರ ಕೂಡ ಇಂತಹುದೇ ಮಸೂದೆಯನ್ನು ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.