ನವದೆಹಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಮಾ.23ರಂದು 58 ಸ್ಥಾನಗಳಿಗೆ ಚುನಾವಣೆ ಜರುಗಲಿದೆ.
ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಜೈನ್, ಸರೋಜ್ ಪಾಂಡೆ, ಅನಿಲ್ ಬಲುನಿ, ಜಿವಿಎಲ್ ನರಸಿಂಹ ರಾವ್, ರಾಜೀವ್ ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿಗಳಾಗಿ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ.
ಡಿ.ಪಿ ವಾಟ್ಸ್, ಅಜಯ್ ಪ್ರತಾಪ್ ಸಿಂಗ್, ಕೈಲಾಸ್ ಸೋನಿ ಮುಂತಾದವರ ಹೆಸರನ್ನು ಪ್ರಕಟಿಸಲಾಗಿದೆ.
ವಿತ್ತ ಸಚಿವರಾದ ಅರುಣ್ ಜೇಟ್ಲಿ, ಪ್ರಕಾಶ್ ಜಾವ್ಡೇಕರ್, ಜೆ.ಪಿ ನಡ್ಡಾ ಮುಂತಾದವರ ಹೆಸರನ್ನು ಮೊದಲ ಹಂತದಲ್ಲೇ ಪ್ರಕಟಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.