ನವದೆಹಲಿ: ಜೂನ್ 21ರಂದು ನಡೆಯಲಿರುವ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಕೇಂದ್ರ ಸರ್ಕಾರ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಈ ದಿನ ನಡೆಯುವ ಯೋಗ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಿದೆ. ಸಂಸತ್ತಿನ ಎಲ್ಲಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಕೇಂದ್ರದ ಎಲ್ಲಾ ಸಚಿವರುಗಳೂ ಸಮಾರಂಭದಲ್ಲಿ ಭಾಗಿಗಳಾಗಲಿದ್ದಾರೆ.
ರಾಜಪಥ್ನಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡಲಿದ್ದಾರೆ ಎನ್ನಲಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಜಗತ್ತಿನ ನಾನಾ ಭಾಗಗಳಲ್ಲೂ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಹಿನ್ನಲೆಯಲ್ಲಿ ವಿವಿಧ ಸಮಾರಂಭಗಳನ್ನು ಏರ್ಪಡಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.