ಬೆಳಗಾವಿ: ಕುಂದಾ ನಗರಿಯ ಕೋಟೆ ಕೆರೆ ದಂಡೆಯಲ್ಲಿ ದೇಶದ ಅತೀ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜವನ್ನು ಇಂದು ಬೆಳಗ್ಗೆ ಹಾರಿಸಲಾಗಿದೆ.
ಈ ಧ್ವಜಸ್ತಂಭದ ಒಟ್ಟು ಉದ್ದ 110 ಮೀಟರ್ ಆಗಿದೆ. ಧ್ವಜದ ಅಳತೆ 36.60 *24.40 ಮೀಟರ್(80*120) ಆಗಿದೆ. ರೂ.1 ಕೋಟಿ 62 ಲಕ್ಷ ಬಜೆಟ್ನಲ್ಲಿ ಇದನ್ನು ನಿರ್ಮಿಸಲಾಗಿದೆ.
ವಿವಿಧ ಧರ್ಮಗುರುಗಳು, ಅಧಿಕಾರಿಗಳು, ಸಾವಿರಾರು ಜನರ ಸಮ್ಮುಖದಲ್ಲಿ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಫಿರೋಜ್ ಸೇಠ್ ಅವರು ದೇಶದ ಎತ್ತರದ ತ್ರಿವರ್ಣ ಧ್ವಜವನ್ನು ಹಾರಿಸಿದರು. ಮರಾಠ ಲಘು ಪದಾತಿದಳದ ಬ್ಯಾಂಡ್ ರಾಷ್ಟ್ರಗೀತೆಯನ್ನು ಮೊಳಗಿಸಿ ಕಾರ್ಯಕ್ರಮವನ್ನು ಇನ್ನಷ್ಟು ಸುಂದರಗೊಳಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.