ನವದೆಹಲಿ: ವಿಶ್ವಜಲ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ‘ಜಲ ಶಕ್ತಿ’ ಮಹತ್ವವನ್ನು ತಿಳಿಸಿದ್ದಾರೆ. ಅಲ್ಲದೇ ಜನರು ನೀರನ್ನು ಸಂಗ್ರಹಿಸಿದಾಗ ನಗರಗಳಿಗೆ, ಗ್ರಾಮಗಳಿಗೆ ಮತ್ತು ರೈತರಿಗೆ ಸಾಕಷ್ಟು ಪ್ರಯೋಜನವಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಅಲ್ಲದೇ ದೇಶ ನೀರಿನ ಸಂರಕ್ಷಣೆಗೆ ಕಟಿಬದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ.
ಟ್ವಿಟರ್ ಮೂಲಕ ನೀರಿನ ಮಹತ್ವ ಸಾರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಪ್ರತಿ ವರ್ಷ ಮಾ.22ರಂದು ವಿಶ್ವ ಜಲ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಬಾರಿ ‘ನೀರಿಗಾಗಿ ಪ್ರಕೃತಿ’ ಎಂಬ ಥೀಮ್ನೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.