ಜೈಪುರ: ಉದ್ಯೋಗವನ್ನು ಸೃಷ್ಟಿಸುವುದು ಪ್ರತಿ ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಇದರಂತೆ ತನ್ನ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮುಂದಾಗಿರುವ ರಾಜಸ್ಥಾನ ಸರ್ಕಾರ ಮುಂದಿನ ತಿಂಗಳು ವೇಳೆಗೆ ವಿವಿಧ ಇಲಾಖೆಗಳಲ್ಲಿ 1 ಲಕ್ಷ 8 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ.
ಈ ಬಗ್ಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದ್ದೇವೆ ಎಂದು ಅಲ್ಲಿನ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಹೇಳಿದ್ದಾರೆ.
ಒಟ್ಟು 108 ವಿಧದ 1 ಲಕ್ಷ 8 ಸಾವಿರ ಉದ್ಯೋಗಗಳನ್ನು ಸೃಷ್ಟಿ ಮಾಡಲಿದ್ದೇವೆ. ಜುಲೈನೊಳಗೆ ಈ ಪ್ರಕ್ರಿಯೆ ಅಂತ್ಯಗೊಳ್ಳಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.