ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಹೆಚ್ಚುವರಿಯಾಗಿ ಕೈಗೆಟುಕುವ ದರದಲ್ಲಿ 3,21,567 ಮನೆಗಳನ್ನು ನಿರ್ಮಿಸಿಕೊಡಲು ಕೇಂದ್ರ ಅನುಮೋದನೆಯನ್ನು ನೀಡಿದೆ.
ಬರೋಬ್ಬರಿ ರೂ.18,203 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಕೇಂದ್ರದಿಂದ ರಾಜ್ಯಗಳಿಗೆ ರೂ.4,752 ಕೋಟಿ ರೂಪಾಯಿ ಸಂದಾಯವಾಗಲಿದೆ.
ಹರಿಯಾಣ, ಪಶ್ಚಿಮಬಂಗಾಳ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್, ಮಿಜೋರಾಂ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ, ಕೇರಳ, ಹಿಮಾಚಲಪ್ರದೇಶ ಪಂಜಾಬ್ ಮತ್ತು ಗೋವಾದ 523 ನಗರಗಳಲ್ಲಿ ಈ ಮನೆಗಳು ನಿರ್ಮಾಣವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.