ನವದೆಹಲಿ: ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ ಮಾದರಿಯಲ್ಲೇ ದೆಹಲಿಯಲ್ಲೂ ಅಪ್ರಾಪ್ತರ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲು ಅಲ್ಲಿನ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಮಂಗಳವಾರ ವಿಧಾನಸಭೆಯಲ್ಲಿ ನಿರ್ಣಯವನ್ನೂ ಅಂಗೀಕರಿಸಿದೆ.
12 ವರ್ಷದೊಳಗಿನ ಮಕ್ಕಳನ್ನು ಅತ್ಯಾಚಾರ ಮಾಡುವ ಆರೋಪಿಗಳಿಗೆ ಮರಣದಂಡನೆಯನ್ನು ವಿಧಿಸುವ ಮತ್ತು ಮಹಿಳೆಯರನ್ನು ಹಿಂಬಾಲಿಸುವುದನ್ನು ಜಾಮೀನು ರಹಿತ ಅಪರಾಧವನ್ನಾಗಿಸುವ ಕಾನೂನು ತರಲು ಅದು ನಿರ್ಧರಿಸಿದೆ.
ಆದರೆ ಇದಕ್ಕಾಗಿ ದೆಹಲಿ ಸರ್ಕಾರ ಅಪರಾಧ ಕಾನೂನು ತಿದ್ದುಪಡಿ ಮಸೂದೆಯ ಕರಡನ್ನು ರಚಿಸಬೇಕಾಗಿದ್ದು, ಅದಕ್ಕೆ ಸಚಿವ ಸಂಪುಟದ ಅನುಮೋದನೆ ಸಿಕ್ಕ ಬಳಿಕ ವಿಧಾನಸಭೆಯಲ್ಲಿ ಮಂಡನೆಯಾಗಬೇಕಿದೆ. ಅಲ್ಲಿ ಸುಲಭವಾಗಿ ಅಂಗೀಕಾರಗೊಂಡರೂ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ಮತ್ತು ಗೃಹ ಇಲಾಖೆಯ ಅನುಮೋದನೆಯನ್ನು ಪಡೆಯಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.