ನವದೆಹಲಿ: ರಾಜತಾಂತ್ರಿಕರನ್ನು ನಡೆಸಿಕೊಳ್ಳುವ ರೀತಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನೂ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಭಾರತ-ಪಾಕಿಸ್ಥಾನ ಒಪ್ಪಿಕೊಂಡಿವೆ.
ಪರಸ್ಪರರ ರಾಜತಾಂತ್ರಿಕರನ್ನು ದೌರ್ಜನ್ಯಕ್ಕೆ ಒಳಪಡಿಸುವ ಬಗ್ಗೆ ಕೇಳಿ ಬಂದ ವಾದ ವಿವಾದಗಳ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
‘1992ರ ರಾಜತಾಂತ್ರಿಕರ ನಿಭಾವಣೆಗೆ ಸಂಬಂಧಿಸಿದ ನೀತಿ ಸಂಹಿತೆಯ ಅಡಿಯಲ್ಲಿ ಭಾರತ ಮತ್ತು ಪಾಕಿಸ್ಥಾನಗಳು ರಾಜತಾಂತ್ರಿಕರನ್ನು ನಡೆಸಿಕೊಂಡ ಬಗೆಗಿನ ಎಲ್ಲಾ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ನಿರ್ಧರಿಸಿಕೊಂಡಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇದೇ ರೀತಿಯ ಹೇಳಿಕೆಯನ್ನು ಪಾಕಿಸ್ಥಾನ ವಿದೇಶಾಂಗ ಕಛೇರಿಯೂ ಬಿಡುಗಡೆಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.