ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಕಾರ್ಪೂರೇಟ್ ವಲಯದಲ್ಲಿ ಮಹತ್ತರ ಸಾಧನೆ ಮಾಡಿದ ಸಾಧಕರಿಗೆ ‘ಬ್ಯುಸಿನೆಸ್ ಸ್ಟ್ಯಾಂಡರ್ಡ್ ಆನ್ವಲ್ ಅವಾರ್ಡ್’ ನೀಡಿ ಗೌರವಿಸಲಿದ್ದಾರೆ.
ಮುಂಬಯಿ ತಾಜ್ ಹೋಟೆಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾರತೀಯ ಉದ್ಯಮ ನಾಯಕರು ಮತ್ತು ಬ್ಯಾಂಕರ್ಗಳ ಮುಂದೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಈ ವರ್ಷ ಉತ್ತಮ ಸಾಧನೆ ಮಾಡಿ ಇನ್ನೋವೇಶನ್, ಸುಸ್ಥಿರತೆ, ನಾಯಕತ್ವದ ಮೂಲಕ ತಮ್ಮ ಕಾರ್ಯಕ್ಷೇತ್ರವನ್ನು ಅತ್ಯುನ್ನತ ಮಟ್ಟಕ್ಕೆ ತೆಗೆದುಕೊಂಡು ಹೋದ ಸಂಸ್ಥೆ ಮತ್ತು ವ್ಯಕ್ತಿಗಳಿಗೆ ಪ್ರಸಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ಮಾರುತಿ ಸುಝುಕಿ ಮುಖ್ಯಸ್ಥ ಆರ್.ಸಿ ಭಾರ್ಗವ ಅವರನ್ನು ‘ಬ್ಯಾಂಕರ್ ಆಫ್ ದಿ ಇಯರ್’, ಜೆಎಸ್ಡಬ್ಲ್ಯೂ ಸ್ಟೀಲ್ ಮುಖ್ಯಸ್ಥ ಸಜ್ಜನ್ ಜಿಂದಾಲ್ ಅವರನ್ನು ‘ಸಿಇಓ ಆಫ್ ದಿ ಇಯರ್’, ಮಾರುತಿ ಸುಝುಕಿ ‘ಕಂಪನಿ ಆಫ್ ದಿ ಇಯರ್’ ಪ್ರಶಸ್ತಿ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.