ನವದೆಹಲಿ: ಇತ್ತೀಚಿಗಷ್ಟೇ ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತಗೊಂಡಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ತಮ್ಮ ಸಂಪೂರ್ಣ ವೇತನ ಮತ್ತು ಭತ್ಯೆಗಳನ್ನು ಪ್ರಧಾನಿ ಪರಿಹಾರ ನಿಧಿಗೆ ದಾನ ಮಾಡಿದ್ದಾರೆ.
ಕಳೆದ 6 ವರ್ಷದಲ್ಲಿ ಸಚಿನ್ ಪಡೆದುಕೊಂಡ ಒಟ್ಟು ವೇತನ ರೂ.90 ಲಕ್ಷ ಮತ್ತು ಇತರ ಭತ್ಯೆಗಳನ್ನು ಹೆಚ್ಚುವರಿಯಾಗಿ ಸಿಕ್ಕಿದೆ. ಈ ಎಲ್ಲಾ ಹಣವನ್ನು ಅವರು ದಾನ ಮಾಡಿದ್ದಾರೆ.
ಸಚಿನ್ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಪ್ರಧಾನಿ, ಅವರ ಈ ಕಾರ್ಯದಿಂದ ಸಂಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡಲು ಸಹಾಯಕವಾಗಲಿದೆ ಎಂದಿದ್ದಾರೆ.
ಸಂಸತ್ತಿನಲ್ಲಿ ಕಡಿಮೆ ಹಾಜರಾತಿಯ ಕಾರಣದಿಂದಾಗಿ ಸಚಿನ್ ಸದಾ ಟೀಕೆಗೆ ಒಳಗಾಗುತ್ತಿದ್ದರು, ಆದರೆ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನವನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಂಡ ಖ್ಯಾತಿಯೂ ಅವರಿಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.