News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಭಾರತ ತೋರಿಸಿದೆ: ಮೋದಿ

ಪಿಲಿಬಿಟ್: ಈಗ ಜಗತ್ತು ಎದುರಿಸುತ್ತಿರುವ ವಿವಿಧ ಸಂಕಷ್ಟಗಳ ನಡುವೆ ಭಾರತ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ತೋರಿಸುತ್ತಿದೆ‌, ಜನರ ಪ್ರತಿಯೊಂದು ಮತದಿಂದ ಇದು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ “ಗುರಿ ಎಷ್ಟೇ ಕಠಿಣವಾಗಿದ್ದರೂ, ಅದನ್ನು ಸಾಧಿಸಲು ಭಾರತ...

Read More

ರಾಹುಲ್ ಗಾಂಧಿ ರಾವಲ್ಪಿಂಡಿಯಿಂದ ಚುನಾವಣೆಗೆ ಸ್ಪರ್ಧಿಸಲಿ: ಆಚಾರ್ಯ ಪ್ರಮೋದ್‌ ಕೃಷ್ಣಂ

ನವದೆಹಲಿ: ಮಾಜಿ ಕಾಂಗ್ರೆಸ್ ನಾಯಕ ಮತ್ತು ಸಂಭಾಲ್‌ನ ಕಲ್ಕಿ ಧಾಮದ ಮುಖ್ಯಸ್ಥ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಸೋಮವಾರ ಘಾಜಿಯಾಬಾದ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದ ನಂತರ ಇದು ಮಹಾತ್ಮ...

Read More

ದೇಶವ್ಯಾಪಿ ಯುಗಾದಿ ಸಂಭ್ರಮ: ಮೋದಿ, ಅಮಿತ್‌ ಶಾ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ: ದೇಶದಾದ್ಯಂತ ಇಂದು ಯುಗಾದಿಯ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ  ಸೇರಿದಂತೆ ಗಣ್ಯರು ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಮಾಡಿ ಕನ್ನಡಿಗರಿಗೆ ಯುಗಾದಿಯ ಶುಭಾಶಯಗಳನ್ನು ಕೋರಿದ್ದಾರೆ. “ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ...

Read More

ಸೌದಿ ಪ್ರಿನ್ಸ್‌ ಮೊಹಮ್ಮದ್ ಬಿನ್ ಸಲ್ಮಾನ್ ಜೊತೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ಥಾನ ಪ್ರಧಾನಿ

ಜೆದ್ದಾ: ಸೌದಿ ಅರೇಬಿಯಾ ಮತ್ತು ಪಾಕಿಸ್ಥಾನ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಮಾತುಕತೆಯ ಮಹತ್ವವನ್ನು ಒತ್ತಿಹೇಳಿದೆ. ಭಾರತವು ಕಾಶ್ಮೀರ ವಿಷಯದಲ್ಲಿ ಮೂರನೇಯವರ ಹಸ್ತಕ್ಷೇಪವನ್ನು ನಿರಾಕರಿಸುತ್ತಾ ಬಂದರೂ ಪಾಕಿಸ್ಥಾನ ಮಾತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯದ ಬಗ್ಗೆ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದು,...

Read More

ಮಾದಕವಸ್ತು ಕಳ್ಳಸಾಗಣೆ: ತಮಿಳುನಾಡಿನ ವಿವಿಧ ಭಾಗಗಳಲ್ಲಿ ಇಡಿ ದಾಳಿ

ಚೆನ್ನೈ: ಡಿಎಂಕೆ ಮಾಜಿ ಕಾರ್ಯಾಧ್ಯಕ್ಷ ಜಾಫರ್ ಸಾದಿಕ್ ಮತ್ತು ಇತರರ ವಿರುದ್ಧ ಮಾದಕವಸ್ತು ಕಳ್ಳಸಾಗಣೆ ಸಂಬಂಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಮಿಳುನಾಡಿನ ಹಲವು ನಗರಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ...

Read More

102 ಕ್ಷೇತ್ರಗಳ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ 1,625 ಅಭ್ಯರ್ಥಿಗಳು ಕಣದಲ್ಲಿ

ನವದೆಹಲಿ:  ನಾಮಪತ್ರ ಹಿಂಪಡೆದ ಬಳಿಕ ದೇಶದ ಮೊದಲ ಹಂತದ ಲೋಕಸಭಾ ಚುನಾವಣೆಯ 102 ಲೋಕಸಭಾ ಕ್ಷೇತ್ರಗಳಲ್ಲಿ 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. 1625 ಅಭ್ಯರ್ಥಿಗಳ ಪೈಕಿ 1491 ಅಭ್ಯರ್ಥಿಗಳು ಪುರುಷರು ಮತ್ತು 134 ಮಹಿಳೆಯರು. ಮೊದಲ ಹಂತದ...

Read More

ಈಶಾನ್ಯ ಇಂದು ನವ ಭಾರತದ ಶ್ರೇಷ್ಠ ಯಶೋಗಾಥೆಯಾಗಿ ಹೊರಹೊಮ್ಮಿದೆ: ಮೋದಿ

ನವದೆಹಲಿ: ಈಶಾನ್ಯ ಇಂದು ನವ ಭಾರತದ ಶ್ರೇಷ್ಠ ಯಶೋಗಾಥೆಯಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮೀಸಲಿಟ್ಟ ಹಣಕ್ಕಿಂತ ಸುಮಾರು ನಾಲ್ಕು ಪಟ್ಟು ಹೆಚ್ಚು ಹೂಡಿಕೆಯಾಗಿದೆ ಎಂದು ಹೇಳಿದರು....

Read More

ಆರ್‌ಎಸ್‌ಎಸ್ ಹೆಸರು ದುರ್ಬಳಕೆ ಮಾಡುತ್ತಿರುವ ಕಾಂಗ್ರೆಸ್‌ ಬೆಂಬಲಿತ ಸಂಘಟನೆ ವಿರುದ್ಧ ಬಿಜೆಪಿ ಚು.ಆಯೋಗಕ್ಕೆ ದೂರು

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರದ ಆಡಳಿತಾರೂಢ ಪಕ್ಷ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಜೊತೆ ನಂಟು ಹೊಂದಿರುವ ಸಂಘಟನೆಯೊಂದು ಆರೆಸ್ಸೆಸ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು...

Read More

5 ರಾಷ್ಟ್ರಗಳಿಗೆ ಮುಂಚಿತ ಎಚ್ಚರಿಕೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತಿದೆ ಭಾರತ

ನವದೆಹಲಿ: ನೇಪಾಳ, ಮಾಲ್ಡೀವ್ಸ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಮಾರಿಷಸ್‌ಗಳಿಗೆ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಜೀವ ಮತ್ತು ಆಸ್ತಿ ನಷ್ಟವನ್ನು ಕಡಿಮೆ ಮಾಡಲು ಮುಂಚಿತ ಎಚ್ಚರಿಕೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಸಹಾಯ ಮಾಡುತ್ತಿದೆ ಎಂದು IMD ಮುಖ್ಯಸ್ಥ ಮೃತ್ಯುಂಜಯ್ ಮಹಾಪಾತ್ರ ಹೇಳಿದ್ದಾರೆ ಭಾರತ...

Read More

ಮೋದಿ ಪ್ರಧಾನಿಯಾದಾಗಿನಿಂದ ಭಾರತದ ಗಡಿಗಳು ಸುರಕ್ಷಿತವಾಗಿವೆ, ವಿಶ್ವದಲ್ಲಿ ದೇಶದ ಗೌರವ ಹೆಚ್ಚಿದೆ: ಯೋಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಭಾರತದ ಗಡಿಗಳು ಸುರಕ್ಷಿತವಾಗಿವೆ ಮತ್ತು ವಿಶ್ವದಲ್ಲಿ ದೇಶದ ಗೌರವ ಹೆಚ್ಚಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ. ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಹಿಂಗನ್‌ಘಾಟ್ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ...

Read More

Recent News

Back To Top