News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದಾಖಲೆಗಳಿಲ್ಲವೆಂದು ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರದ ಸೂಚನೆ

ಬೆಂಗಳೂರು: ತುರ್ತು ಆರೋಗ್ಯ ಪರಿಸ್ಥಿತಿಯ ಸಂದರ್ಭದಲ್ಲಿ ಆಸ್ಪತ್ರೆಗಳು ರೋಗಿಯಿಂದ ಯಾವುದೇ ದಾಖಲೆಗಳನ್ನು ಕೇಳದೆ ಮೊದಲು ಚಿಕಿತ್ಸೆಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ಹೊರಡಿಸಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಸರ್ಕಾರ ಈ ಸೂಚನೆಯನ್ನು...

Read More

ರೈತ ವಿದ್ಯಾನಿಧಿಯನ್ನು ಪ್ರಕಟಿಸಿದ ದೇಶದ ಏಕೈಕ ಸಿಎಂ ಬೊಮ್ಮಾಯಿ: ನಳಿನ್

ಬೆಂಗಳೂರು: ಕರ್ನಾಟಕವು ಕಳೆದ ಆರು ವರ್ಷಗಳಲ್ಲಿ 3 ಜನ ಮುಖ್ಯಮಂತ್ರಿಗಳನ್ನು ಕಂಡಿದೆ. ಒಬ್ಬರು ಜನನಾಯಕ. ಇನ್ನೊಬ್ಬರು ಖಳನಾಯಕ ಮತ್ತು ಮತ್ತೊಬ್ಬರು ಕಣ್ಣೀರ ನಾಯಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಂಡ್ಯದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ...

Read More

ಸಿದ್ದರಾಮಯ್ಯರನ್ನು ನಿರುದ್ಯೋಗಿ ಮಾಡಲು ನಾವು ಬದ್ಧ: ನಳಿನ್‌ ಕುಮಾರ್

ಬೆಂಗಳೂರು: “ಸಿದ್ದರಾಮಯ್ಯನವರು  ಎಲ್ಲೇ ಚುನಾವಣೆಗೆ ನಿಂತರೂ ಅವರನ್ನು ಸೋಲಿಸಿಯೇ ಸಿದ್ಧ. ಅವರನ್ನು ನಿರುದ್ಯೋಗಿ ಮಾಡಲು ನಾವು ಬದ್ಧʼ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮಾಜಿ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

Read More

ನ.11ರಂದು ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲಿಗೆ ಚಾಲನೆ

ಬೆಂಗಳೂರು: ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ನವೆಂಬರ್ 11 ರಂದು‌ ಕಾರ್ಯಾರಂಭ ಮಾಡಲಿದೆ. ಅಂದು ಬೆಂಗಳೂರಿನಿಂದ ರೈಲು ಯಾತ್ರೆ ಹೊರಡಲಿದೆ. ಅಕ್ಟೋಬರ್ 30 ರಂದು ಬುಕ್ಕಿಂಗ್ ಪ್ರಾರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರೇ ದಿನದಲ್ಲಿ ಸಂಪೂರ್ಣ ಸೀಟುಗಳು...

Read More

262 ಹೊಸ ಆಂಬುಲೆನ್ಸ್ ಖರೀದಿಗೆ 98.90 ಕೋಟಿ ರೂ ಅನುಮೋದಿಸಿದ ಸಂಪುಟ

-ಬೆಂಗಳೂರು: ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ನೀಡಲು 262 ಹೊಸ ಆಂಬುಲೆನ್ಸ್ ಮತ್ತು ವೈದ್ಯಕೀಯ ಉಪಕರಣ ಖರೀದಿಸಲು 98.90 ಕೋಟಿ ರೂಪಾಯಿಗಳ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ...

Read More

ನಗರ ಪ್ರದೇಶಗಳಿಗೆ 24X7 ನೀರು ಪೂರೈಕೆಗೆ 7,620 ಕೋಟಿ ರೂ ಯೋಜನೆ

ಬೆಂಗಳೂರು: ʼದಾಹ ಮುಕ್ತ ಕರ್ನಾಟಕʼ ಯೋಜನೆಯಡಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆಯಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ. 7,620 ಕೋಟಿ ರೂಪಾಯಿ ಮೊತ್ತವನ್ನು ಈ ಮಹತ್ವಾಕಾಂಕ್ಷೆಯ...

Read More

ಬೆಂಗಳೂರು ಏರ್‌ಪೋರ್ಟ್‌ ಅಲ್ಟ್ರಾಫಾಸ್ಟ್ 5G ಪಡೆದ ದೇಶದ ಮೊದಲ ಏರ್‌ಪೋರ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಅಲ್ಟ್ರಾಫಾಸ್ಟ್ 5G ನೆಟ್‌ವರ್ಕ್‌ಗೆ ಪ್ರವೇಶ ಪಡೆದ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ. ಟೆಲಿಕಾಂ ಮೇಜರ್ ಭಾರ್ತಿ ಏರ್‌ಟೆಲ್ ಗುರುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ತನ್ನ ಏರ್‌ಟೆಲ್ 5G...

Read More

ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು....

Read More

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಕಾಣುತ್ತಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಮತ್ತು ಕೋವಿಡ್ ನಂತರವೂ ಬಿಜೆಪಿ ಜನಪರ ಆಡಳಿತ ಕೊಟ್ಟಿದೆ. ಜನರಿಗೆ ಹತ್ತಿರವಾಗಿ ಕಳೆದ ಬಾರಿಗಿಂತ ಹೆಚ್ಚು ಜನಮನ್ನಣೆಯೂ ಸಿಗುವ ದಿಕ್ಸೂಚಿ ಕಾಣುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಶಾಲೆ, ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ

ಬೆಂಗಳೂರು: ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡಿಸಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆರೋಗ್ಯ ಮತ್ತು ಸದ್ವಿಚಾರ ಚಿಂತನೆಗಳನ್ನು ಉತ್ತೇಜಿಸಲು ದಿನದಲ್ಲಿ 10 ನಿಮಿಷಗಳ ಕಾಲ ಧ್ಯಾನ ಮಾಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ...

Read More

Recent News

Back To Top